Monday, March 24, 2025
Homeಸುದ್ದಿಗಳುಸಕಲೇಶಪುರಮುಖ್ಯಮಂತ್ರಿಗಳಿಂದ  ಪ್ರತಿಭಟನಕಾರರಿಗೆ ದೂರವಾಣಿ ಕರೆ : ಸಮಸ್ಯೆ ಬಗೆಹರಿಸುವ ಭರವಸೆ

ಮುಖ್ಯಮಂತ್ರಿಗಳಿಂದ  ಪ್ರತಿಭಟನಕಾರರಿಗೆ ದೂರವಾಣಿ ಕರೆ : ಸಮಸ್ಯೆ ಬಗೆಹರಿಸುವ ಭರವಸೆ

ಸಕಲೇಶಪುರ; ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೃತ ಮನು ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ದೂರವಾಣಿ ಕರೆ ಮಾಡಿ ಪ್ರತಿಭಟನೆ ಹಿಂಪಡೆಯಲು ಮನವಿ ಮಾಡಿದ್ದಾರೆ. ಹೋರಾಟಗಾರ ಸಾಗರ್ ಜಾನೆಕೆರೆ ರವರಿಗೆ ಬಂದ ದೂರವಾಣಿ ಕರೆಯನ್ನು ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಕರೆ ಸ್ವೀಕರಿಸಿದ್ದು
ಇನ್ನೆರಡು ದಿನಗಳಲ್ಲಿ ರಾಜ್ಯದ ಎಲ್ಲಾ ಉನ್ನತ ಅರಣ್ಯಾಧಿಕಾರಿಗಳನ್ನು ಸಕಲೇಶಪುರಕ್ಕೆ ಕಳುಹಿಸಿ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ‌. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಗೋಪಾಲಯ್ಯ ಪ್ರತಿಭಟನಕಾರರನ್ನು ಭೇಟಿ ಮಾಡಲು ಆಗಮಿಸುತ್ತಿದ್ದಾರೆ.

RELATED ARTICLES
- Advertisment -spot_img

Most Popular