ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಬಿ. ಎಸ್ ಜಯಕುಮಾರ್ ನೇಮಕ.
ಸಕಲೇಶಪುರ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕಾರಿಣಿ ಸದಸ್ಯರಾಗಿ ಬಿ. ಎಸ್ ಜಯಕುಮಾರ ಅವರನ್ನು ನೇಮಿಸಲಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಉಸ್ತುವಾರಿಗಳಾದ ಕೆ. ರಾಜು ಮಧು ಎಐಸಿಸಿ ರಾಷ್ಟ್ರೀಯ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ರಾಜೇಶ್ ಲಿಲೋತಿಯ, ಕರ್ನಾಟಕ ಪ್ರದೇಶ ಸಮಿತಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಪರಿಶಿಷ್ಟ ವಿಭಾಗದ ಜಿಲ್ಲಾಧ್ಯಕ್ಷ ಎಂ ಕೆ ದೇವಪ್ಪ ಮಲ್ಲಿಗೆವಾಳು ಅವರ ಅನುಮೋದನೆ ಮೇರೆಗೆ ಬಾಳ್ಳುಪೇಟೆಯ ಜಯಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ ಸಮಯದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದ ಜಯಕುಮಾರ್ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದರು. ಪರಿಶಿಷ್ಟ ವಿಭಾಗದ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ವಹಿಸಿರುವ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆಯಲ್ಲಿ, ಹಾಲಿ ಮಾಜಿ ಸಂಸದರು ಮತ್ತು ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಕಾಂಗ್ರೆಸ್ ಸಮಿತಿಗಳೊಂದಿಗೆ ಸಹಕರಿಸಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದಕ್ಕೆ ಶ್ರಮಿಸುವಂತೆ ತಿಳಿಸಿ ಕರ್ನಾಟಕ ಪ್ರದೇಶ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಧರ್ಮಸೇನ ಆದೇಶ ಮಾಡಿದ್ದಾರೆ.