ಕೆಂಪೇಗೌಡರಿಂದ ನಗರ ನಿರ್ಮಾಣ ಪರಿಕಲ್ಪನೆ ಸಾಕಾರ- ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್
ಸಕಲೇಶಪುರ :ಗುರುವಾರ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ಒಕ್ಕಲಿಗರ ಸಂಘ ಏರ್ಪಡಿಸಿದ್ದ 515 ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಕೆಂಪೇಗೌಡರು ನಗರ ನಿರ್ಮಾಣದ ಜೊತೆ ಜೊತೆಗೆ ಕೃಷಿಗೆ ಸಹ ಆದ್ಯತೆಯನ್ನು ನೀಡಿದ್ದು. ಹಲವಾರು ಕೆರೆ, ಕೋಟೆ-ಕೊತ್ತಲೆಗಳು, ದೇವಾಲಯಗಳನ್ನು, ಪ್ರಮುಖ ನಾಲ್ಕು ದ್ವಾರಗಳನ್ನು ನಿರ್ಮಾಣ ಮಾಡಿದ್ದಾರೆ. ಪ್ರಸ್ತುತ ಬೆಂಗಳೂರು ನಗರವು ಜನಸಾಮಾನ್ಯರಿಗೆ ಬದುಕು ಕಟ್ಟಿಕೊಳ್ಳಲು ಪ್ರಮುಖ ನಗರವಾಗಿದೆ ಎಂದರು. ಪ್ರಸ್ತುತ ಬೆಂಗಳೂರಿನಲ್ಲಿ ಬಂದಿರುವವರು ಒಂದಲ್ಲ ಒಂದು ಕೆಲಸಗಳನ್ನು ನಿರ್ವಹಿಸಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಬೆಂಗಳೂರಿನ ಸುತ್ತಮುತ್ತಲಿನ ಹಲವಾರು ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲಿಸುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಇದೆ ವೇಳೆ ಸಕಲೇಶಪುರ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡರ ಪ್ರತಿಮೆಗೆ ನನ್ನ ಸಹಕಾರ ಇರಲಿದೆ. ಹಾಗೂ ತಾಲೂಕಿನ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಮುಂದಿನ ದಿನಗಳಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ಹೇಳಿದರು.