ಹಾಸನ : ಸಕಲೇಶಪುರ ತಾಲ್ಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಅಭಿ ವೃದ್ಧಿ ಅಧಿಕಾರಿಯಾಗಿರುವ ಸಂಗಮೇಶ್ ಅವರು ಈ ಹಿಂದೆ ಬಾಗೆ ಗ್ರಾಪಂನಲ್ಲಿ ಪಿಡಿಓ ಆಗಿದ್ದಾಗ ಅಕ್ರ ಮವಾಗಿ ತನ್ನ ಪತ್ನಿಯ ಹೆಸರಿನಲ್ಲಿ ನಿವೇಶನ ಮಂಜೂರು ಮಾಡಿಸಿಕೊಂಡಿರುವ ಬಗ್ಗೆ ತನಿಖೆ ನಡೆಸಲಾಗುವುದು, ಆನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಕಾಂತರಾಜು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ತಾಲ್ಲೂಕಿನ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಅಕ್ರಮದ ಬಗ್ಗೆ ತನಿಖೆ ನಡೆಸಿ ವರದಿ ನೀಡು ವಂತೆ ಆದೇಶಿಸಿದ್ದು, ವರದಿ ಬಂದ ನಂತರ ಸತ್ಯಾಸತ್ಯತೆ ತಿಳಿಯಲಿದೆ. ಒಂದು ವೇಳೆ ಆರೋಪ ಮಾಡಿರುವುದು ಸತ್ಯವಾದರೆ ಆತನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಆರೋಪಕ್ಕೆ ಸಂಬಂಧಿಸಿ ದಂತೆ ಪತ್ರಿಕೆಗಳು ಮತ್ತು ಮಾಧ್ಯ ಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಾಗೆ ಗ್ರಾ.ಪಂ ಸದಸ್ಯ ಚಾರ್ಲ್ಸ್ ಅವರು ನೀಡಿರುವ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
2013-14 ರಲ್ಲಿ ಬಾಗೆ ಗ್ರಾಪಂ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅಕ್ರಮವಾಗಿ ಮನೆ ಮಂಜೂರು ಮಾಡಿಕೊಂಡಿರುವ ಆರೋಪ ಗಳು ಕೇಳಿ ಬರುತ್ತಿದ್ದು, ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಲ್ಲಿ ಬಾಗೇ ಗ್ರಾಮ ಸ.ನಂ. 15ರಲ್ಲಿ 120 ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಪತ್ನಿ ಸುಧಾ ಹೆಸರಿನಲ್ಲಿ ನಿವೇಶನ ಮಂಜೂರು ಮಾಡಿಸಿಕೊಂಡಿ ರುವ ಬಗ್ಗೆ ಆರೋಪ ಕೇಳಿ ಬಂದಿದೆ.
ನಿವೇಶನ ಖಾತೆ ಮಾಡಿಸಿ ಕೊಂಡು ಕಂದಾಯ ಪಾವತಿಸಿ ರುವ ಬಗ್ಗೆ ಬಹಿರಂಗವಾಗಿ ಪತ್ರಿಕಾ ಗೋಷ್ಠಿಯಲ್ಲಿ ದಾಖಲೆ ಸಮೇತ ಬಹಿರಂಗಪಡಿಸಿರುವ ಗ್ರಾಪಂ ಚಾರ್ಲ್ಸ್ ಅವರು ಈ ಪಿಡಿಓ ವಿರುದ್ದ ಕ್ರಮ ಕೈಗೊ ಳ್ಳಬೇಕೆಂದು ಆಗ್ರಹಿಸಿದ್ದಾರೆ.