ಸಕಲೇಶಪುರ: ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಚಾಲಕ ಸೀತಾರಾಮ ಶೆಟ್ಟಿ (68) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಸಕಲೇಶ್ವರಸ್ವಾಮಿ ರಥೋತ್ಸವ ಸಮಿತಿ, ಪ್ರಸನ್ನ ಗಣಪತಿ ಸೇವಾ ಸಮಿತಿ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಕಲೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಕಳೆದ ನಾಲ್ಕು ದಿನಗಳಿಂದ ದೇವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ರಾತ್ರಿ ದೇವಸ್ಥಾನದಿಂದ ಬಂದು ನಿದ್ರಿಸಿದ್ದು ಹಾಗೆಯೆ ಹೃದಯಾಘಾತಕ್ಕೆ ತುತ್ತಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿ , ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ.
ತಾಜಾ ಸುದ್ದಿ