ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ- ಮುರಳಿ ಮೋಹನ್.
ಸಕಲೇಶಪುರ : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಪ್ರಥಮ ಸಭೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನೆಡೆಯಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮುರಳಿ ಮೋಹನ್ ನೇತೃತ್ವದಲ್ಲಿ ನಡೆದ ಸಭೆ ಜರುಗಿತು. ನಂತರ ಮಾತನಾಡಿದ ಮುರಳಿ ಮೋಹನ್, ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಯಿಂದ ಯಾರೂ ಕೂಡ ವಂಚಿತರಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರ ದಾನ್ಯಗಳಗುಣಮಟ್ಟ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ. ಇದರಲ್ಲಿ ಕೆಲವು ಫಲಾನುಭವಿಗಳಿಗೆ ಈ ಯೋಜನೆ ತಲುಪಿರುವುದಿಲ್ಲ ಹಾಗಾಗಿ ಪಂಚ ಗ್ಯಾರಂಟಿ ಯೋಜನೆ ಅಧಿಕಾರಿಗಳು ಯೋಜನೆಗಳ ಲೋಪ ದೋಷಗಳನ್ನು ಪರಿಶೀಲಿಸಿ ಎಲ್ಲಾ ಫಲಾನುಭವಿಗಳಿಗೆ ದೊರೆಯುವಂತೆ ಮಾಡಬೇಕು ಎಂದು ಸಭೆಗೆ ತಿಳಿಸಿದರು.ಈ ವೇಳೆ ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿಯ ತಾಲೂಕು ಸಮಿತಿಯ ಸದಸ್ಯರಿಗೆ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೇಘನ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಾಧರ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹರೀಶ್, ಆದಿತ್ಯ ಸೇರಿದಂತೆ ಅನುಷ್ಠಾನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.