ಸಕಲೇಶಪುರ: ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವರು ಸ್ಥಳಕ್ಕೆ ಬಂದು ಕಾಡಾನೆ ಸಮಸ್ಯೆ ಶಾಶ್ವತವಾಗಿ ಪರಿಹರಿಸುವ ಖಚಿತ ಭರವಸೆ ನೀಡುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲವೆಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಹೆಬ್ಬನಹಳ್ಳಿ ಸಮೀಪ ಮಂಗಳವಾರ ಮುಂಜಾನೆ ಮನು ಎಂಬಾತ ಕಾಡಾನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ
ಜನ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದರು. ಆದರೆ ಹಾಸನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಗೋಪಾಲಯ್ಯ ಘಟನಾ ಸ್ಥಳಕ್ಕೆ ಬಾರದೆ ಬೆಂಗಳೂರಿಗೆ ಹಿಂತಿರುಗಿದ್ದರಿಂದ ಜನ ಶಾಸಕ ಎಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಶಾಶ್ವತವಾಗಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಕಾಡಾನೆ ದಾಳಿಯಿಂದ ಮೃತ ಮನುವಿನ ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಆರಂಭಿಸಿದ್ದಾರೆ.