Tuesday, April 22, 2025
Homeಸುದ್ದಿಗಳುಸಕಲೇಶಪುರಸಕಲೇಶಪುರದಲ್ಲಿ ಜನ ಸಂಕಲ್ಪ ಯಾತ್ರೆ; ಮಾಜಿ ಶಾಸಕ ಎಚ್ ಎಂ ವಿಶ್ವನಾಥ್

ಸಕಲೇಶಪುರದಲ್ಲಿ ಜನ ಸಂಕಲ್ಪ ಯಾತ್ರೆ; ಮಾಜಿ ಶಾಸಕ ಎಚ್ ಎಂ ವಿಶ್ವನಾಥ್

ಸಕಲೇಶಪುರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಡಿಸೆಂಬರ್ 13 ರಂದು ತಾಲೂಕಿಗೆ ಆಗಮಿಸುತ್ತಿದ್ದು ಈ ನಿಟ್ಟಿನಲ್ಲಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಧ್ಯಾಹ್ನ 3ಗಂಟೆಗೆ ಸರಿಯಾಗಿ ಬೃಹತ್ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಜಿ ಶಾಸಕ ಎಚ್.ಎಂ ವಿಶ್ವನಾಥ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಕಾಡಾನೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ರಚನೆ ಮಾಡಿದ್ದಾರೆ ಇದಲ್ಲದೆ ಒತ್ತುವರಿ ತೆರವು ಸಮಸ್ಯೆಯನ್ನು ಸಹ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. 10 ಎಚ್.ಪಿ ಒಳಗಿನ ಮೋಟಾರ್ ಗಳಿಗೆ ಉಚಿತ ವಿದ್ಯುತ್ ನ್ನು ಬಿಜೆಪಿ ಸರ್ಕಾರ ನೀಡಿದೆ. ಇದಲ್ಲದೆ ಬೆಳೆಗಾರರ ಹಲವು ಸಮಸ್ಯೆಗಳನ್ನು ಬಿಜೆಪಿ ಸರ್ಕಾರ ಬಗೆಹರಿಸಿದೆ. ಶಾಸಕ ಎಚ್.ಕೆ ಕುಮಾರಸ್ವಾಮಿರವರ ನಿರ್ಲಕ್ಷ್ಯದಿಂದ ಕಾಡಾನೆ ಸಮಸ್ಯೆ ಕ್ಷೇತ್ರದಲ್ಲಿ ಗಂಭೀರವಾಗಲು ಕಾರಣವಾಗಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರವರಿಂದ ಕಾಡಾನೆ ಸಮಸ್ಯೆ ಬಗೆಹರಿಯುತ್ತದೆ, ಆದರೆ ಶಾಸಕರು ಸಮಸ್ಯೆಯನ್ನು ದೇವೆಗೌಡರಿಗೆ ಸರಿಯಾಗಿ ತಿಳಿಸಲು ವಿಫಲರಾಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಬಿಸಿರಕ್ತದ ಯುವಕ ಅವರ ಟೀಕೆಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಎಂದರು.
ಮಾಜಿ ಶಾಸಕ ಬಿ.ಆರ್ ಗುರುದೇವ್ ಮಾತನಾಡಿ ಶಾಸಕ ಎಚ್.ಕೆ ಕುಮಾರಸ್ವಾಮಿರವರು ಸಕಲೇಶಪುರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ದಿ ಪಡಿಸುವಲ್ಲಿ ವಿಫಲರಾಗಿದ್ದಾರೆ. ಶಾಸಕ ಎಚ್.ಕೆ ಕುಮಾರಸ್ವಾಮಿರವರು ಸದನದಲ್ಲಿ ಹೋರಾಟ ಮಾಡುವ ಬದಲು ಕ್ಷೇತ್ರದಲ್ಲಿ ಹೋರಾಟ ಮಾಡಿದರೆ ಏನು ಪ್ರಯೋಜನ, ಶಾಸಕರಿಂದ ಹಲವು ಸಮಸ್ಯೆಗಳು ಕ್ಷೇತ್ರದಲ್ಲಿ ಜ್ವಲಂತವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಜನ ಸಂಕಲ್ಪ ಯಾತ್ರೆ ಹಿನ್ನೆಲೆಯಲ್ಲಿ ತಾಲೂಕಿಗೆ ಆಗಮಿಸುತ್ತಿದ್ದು ಸಾರ್ವಜನಿಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಕ್ಯಾನಹಳ್ಳಿ ಸುರೇಶ್, ಜೈಮಾರುತಿ ದೇವರಾಜ್, ಪರ್ವತಯ್ಯ ಹಾಜರಿದ್ದರು.
9ಎಸ್.ಕೆ.ಪಿ.ಪಿ 1 ಸಕಲೇಶಪುರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾಜಿ ಶಾಸಕರುಗಳಾದ ಎಚ್.ಎಂ ವಿಶ್ವನಾಥ್ ಹಾಗೂ ಬಿ.ಆರ್ ಗುರುದೇವ್ ಮಾತನಾಡಿದರು

RELATED ARTICLES
- Advertisment -spot_img

Most Popular