ಡಿವೈಡರ್ ಗೆ ಡಿಕ್ಕಿ ಹೊಡೆದು ಸುಟ್ಟು ಭಸ್ಮವಾದ ಕಾರು; ಖ್ಯಾತ ಕ್ರಿಕೆಟರ್ ರಿಷಭ್ ಪಂತ್‌ಗೆ ಗಂಭೀರ ಗಾಯ
ನವ ದೆಹಲಿ: ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಕ್ರಿಕೆಟರ್, ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಗೊಂಡಿದ್ದಾರೆ. ಅವರು ಶುಕ್ರವಾರ ಬೆಳಗ್ಗೆ ಉತ್ತರಾಖಂಡ್‌ನಿಂದ ದೆಹಲಿಗೆ ವಾಪಸ್ ಆಗುತ್ತಿದ್ದರು. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿರುವ ದೆಹಲಿ-ಡೆಹ್ರಾಡೂನ್ ಹೆದ್ದಾರಿಯ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಸದ್ಯ ರಿಷಭ್ ಪಂತ್‌ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣಿ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ. ಹಾಗೇ, ರಿಷಬ್ ದಾಖಲಾಗಿದ್ದ ಸಕ್ಷಮ್ ಆಸ್ಪತ್ರೆಗೆ ದೇಹತ್ ಪೊಲೀಸ್ ಅಧಿಕಾರಿ ಸ್ವಪ್ನಾ ಕಿಶೋರ್ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.