ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ,
ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (51) (Anchor Aparna) ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಜುಲೈ 11) ರಾತ್ರಿ ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ