ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ಇಬ್ಬರ ಹತ್ಯೆಗೈದ
ಪಾತಕಿಗಳು!ಹಾಸನ: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ (Hasan Shoot Out) ನಡೆದಿದೆ. ಪಾತಕಿಗಳು ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದಿದ್ದಾರೆ. ಹಾಸನ ನಗರದ ಹೊಯ್ಸಳನಗರ ಬಡಾವಣೆಯಲ್ಲಿ ಜೂನ್ 20ರ ಮಧ್ಯಾಹ್ನ ಘಟನೆ ನಡೆದಿದೆ. ಸ್ಥಳಕ್ಕೆ ಕೆಆರ್‌ಪುರಂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕಾರಿನಲ್ಲಿದ್ದ ಇಬ್ಬರನ್ನು ಅಟ್ಟಾಡಿಸಿ ಹಂತಕರು ಗುಂಡಿಟ್ಟು ಕೊಂದಿದ್ದಾರೆ ಎನ್ನಲಾಗಿದೆ. ಕಾರಿನೊಳಗೆ ಒಬ್ಬನ ಮೃತದೇಹ ಇದ್ದರೆ ಮತ್ತೊಬ್ಬ ಶವ ರಸ್ತೆ ಬದಿಯಲ್ಲಿ ಬಿದ್ದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದಾರೆ. ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿದ್ದಾರೆ. ಆಸ್ತಿ ವಿಚಾರಕ್ಕೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.