ಸಕಲೇಶಪುರ: ತಾಲೂಕಿನಲ್ಲಿ ಅಕ್ರಮ ಮಧ್ಯ ಮಾರಾಟ ಹೆಚ್ಚಳವಾಗುತ್ತಿದೆ ಎಂದು ಆರೋಪಿಸಿ ಕರವೇ ಸ್ವಾಭಿಮಾನಿ ವೇದಿಕೆ ವತಿಯಿಂದ ಪಟ್ಡಣದ ಅಬಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಜಾನೆಕೆರೆ ಸಾಗರ್ ಪಟ್ಟಣದಲ್ಲಿ ಬೆಳಿಗ್ಗೆ 6 ಗಂಟೆಗೆ ಮಧ್ಯದ ಅಂಗಡಿಗಳನ್ನು ತೆರೆಯಲಾಗುತ್ತಿದೆ. ಸಣ್ಣಪುಟ್ಟ ಅಂಗಡಿಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲಾಗುತ್ತಿದೆ. ಸಿಎಲ್ 7 ಗಳಲ್ಲಿ ಮಧ್ಯವನ್ಮು ಕೌಂಟರ್ ಸೇಲ್ ಮಾಡಲಾಗುತ್ತಿದೆ.ಈ ಕುರಿತು ಅಬಕಾರಿ ಇಲಾಖೆಯವರನ್ನು ಪ್ರಶ್ನಿಸಿದರೆ ಉಡಾಪೆ ಉತ್ತರ ನೀಡುತ್ತಾರೆ .ಕೂಡಲೆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಸಂಘಟನೆಯ ಪ್ರಮುಖರುಗಳಾದ ಚಂದನ್, ಅಜಿತ್, ಶಿವು ಮುಂತಾದವರು ಹಾಜರಿದ್ದರು.