Friday, November 22, 2024
Homeಸುದ್ದಿಗಳುಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ದೇವರ ಮೊಸಳೆ ಬಬಿಯಾ ಇನ್ನಿಲ್ಲ

ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ದೇವರ ಮೊಸಳೆ ಬಬಿಯಾ ಇನ್ನಿಲ್ಲ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ(Anantha Padmanabha Swamy Temple) ಕ್ಷೇತ್ರ ಪಾಲಕನಂತಿದ್ದ ಮೊಸಳೆ ʼಬಬಿಯಾʼ(Babiya) ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.

 

ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ(Lake) ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

 

ಹಲವಾರು ದೇವಸ್ಥಾನಗಳಲ್ಲಿ ದೇವರ ಆನೆ, ಬಸವ ಇತ್ಯಾದಿ ಪ್ರಾಣಿಗಳಿಗಳಿರುತ್ತದೆ. ಆದರೆ ಈ ದೇವಾಲದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮಾನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯಲ್ಲಿ ಈ ಮೊಸಳೆಯೂ ಕೂಡ ಇಲ್ಲೇ ವಾಸವಾಗಿರುತ್ತದೆ. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು. ಹಾಗೆಂದು ಇದುವರೆಗೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

 

ಅನಂತಪುರ ಕ್ಷೇತ್ರದಲ್ಲಿರುವ ಈ ಮೊಸಳೆ ಹೆಚ್ಚಿನ ಸಂದರ್ಭದಲ್ಲಿ ದೇವಾಲಯದ ಎಡಬದಿಯಲ್ಲಿರುವ ಗುಹೆಯಲ್ಲಿ ಇರುತ್ತಿತ್ತು. ಮಧ್ಯಾಹ್ನ ದೇವಾಲಯದ ನೈವೇದ್ಯವನ್ನು ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು.  ಇದನ್ನೂ ಓದಿ: ಅನಂತಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಪ್ರವಚನದ ವೇಳೆ ಮೊಸಳೆ ಪ್ರತ್ಯಕ್ಷ

RELATED ARTICLES
- Advertisment -spot_img

Most Popular