ಬೆಂಗಳೂರು: ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (Dearness Allowance)ಹೆಚ್ಚಳ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಅಕ್ಟೋಬರ್.07) ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು 1 ಜುಲೈ 2022ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಸರ್ಕಾರ ಅನುಮೋದಿಸಿದೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ