ಹಾಸನ : ದೇಶ ಇಬ್ಬಾಗದ ಮಾತುಗಳನಾಡಿದ ಸಂಸದ ಡಿ.ಕೆ ಸುರೇಶ್ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಕಟ್ಟೆಗದ್ದೆ ನಾಗರಾಜ್ ಸೇರಿದಂತೆ ಹಲವು ಯುವ ಬಿಜೆಪಿ ಮುಖಂಡರನ್ನು ಪೊಲೀಸರು ಬಂದಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರು ವರ್ಷಕ್ಕೆ ಪಡೆದಿದ್ದಾರೆ. ಕಟ್ಟೆಗದ್ದೆ ನಾಗರಾಜ್ ಅವರನ್ನು ಬಂಧಿಸುವ ವೇಳೆ ಪೊಲೀಸರು ಅವಮಾನೀಯವಾಗಿ ನೆಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.ಪೊಲೀಸರ ವರ್ತನೆಯನ್ನು ಬಿಜೆಪಿ ಕಾರ್ಯಕರ್ತರು ಖಂಡಿಸಿದ್ದಾರೆ. ಈ ವೇಳೆ ಮಾತನಾಡಿದ ನಾಗರಾಜ್ ರವರು ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ನಮ್ಮ ಹೋರಾಟವನ್ನು ಹತ್ತಿಕುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದಕ್ಕೆ ನಾವು ಜಗ್ಗುವುದಿಲ್ಲ ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿ ಎಂದು ಎಚ್ಚರಿಕೆ ನೀಡಿದರು.