Sunday, April 20, 2025
Homeಸುದ್ದಿಗಳುಸಕಲೇಶಪುರಹೇಮಾವತಿ ನದಿ ದಡದಲ್ಲಿ ತಾಲೂಕು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಸಾಮೂಹಿಕ ಸತ್ಯನಾರಾಯಣ...

ಹೇಮಾವತಿ ನದಿ ದಡದಲ್ಲಿ ತಾಲೂಕು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಸಕಲೇಶಪುರ: ಹಿಂದೂ ಸಮಾಜಕ್ಕೆ ಒಳಿತಾಗಲಿ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಮಾಡಲಾಗುತ್ತಿದೆ ಎಂದು ಹಿಂದೂ ಮುಖಂಡ ರಘು ಸಕಲೇಶಪುರ ಹೇಳಿದರು.


ಪಟ್ಟಣದ ಹೊಳೆಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ಮಾತನಾಡಿದ ಅವರು ಹಿಂದೂ ಸಮಾಜದ ಜಾಗೃತಿ ಹಾಗೂ ಏಳಿಗೆಗಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಲಾಗಿದ್ದು ಸುಮಾರು 120ಕ್ಕೂ ಹೆಚ್ಚು ದಂಪತಿಗಳು ಈ ಸಾಮೂಹಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂದೂ ಸಮಾಜದ ಏಳಿಗೆಗಾಗಿ ಪ್ರಾರ್ಥಿಸಿದ್ದಾರೆ.

ವೇದ ಬ್ರಹ್ಮ ಮಹೇಶ್ ಭಟ್ ಸತ್ಯನಾರಾಯಣ ಪೂಜೆ ಅಂಗವಾಗಿ ವಿಶೇಷವಾಗಿ ಸ್ವಸ್ತಿಕ ಪೂಜೆಯನ್ನು ಮಾಡಿಸಿದ್ದಾರೆ.ಮನೆಗಳಲ್ಲಿ ಸತ್ಯನಾರಾಯಣ ಪೂಜೆ ಮಾಡುವುದು ಕಷ್ಟ ಎಂಬ ನಿಟ್ಟಿನಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಧಾರ್ಮಿಕ ಕಾರ್ಯಕ್ರಮಗಳನ್ನು ಹಿಂದೂ ಸಮಾಜದ ಏಳಿಗೆಗಾಗಿ ಆಯೋಜಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಸತ್ಯನಾರಾಯಣ ಪೂಜೆಯನ್ನು ಕಬ್ಬಿನಗದ್ದೆ ಶೇಖರ್ ಮತ್ತು ನೇತ್ರಾವತಿ ದಂಪತಿಗಳು ನೆರವೇರಿಸಿದರು.
ಈ ಸಂಧರ್ಭದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಿದ್ದೇಶ್ ನಾಗೇಂದ್ರ, ಮಾಜಿ ಶಾಸಕ ಬಿ.ಆರ್ ಗುರುದೇವ್, ಸ್ಥಳೀಯ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್, ಡಿ.ವೈ.ಎಸ್.ಪಿ ಮಿಥುನ್, ಜಿ.ಪಂ ಮಾಜಿ ಸದಸ್ಯ ಅಮಿತ್ ಶೆಟ್ಟಿ, ಬಿಜೆಪಿ ಮುಖಂಡರುಗಳಾದ ಬಾಗೆ ಜಯಪ್ರಕಾಶ್, ಹೆತ್ತೂರು ವಿಜಯ್ ಕುಮಾರ್, ಕಬ್ಬಿನಗದ್ದೆ ಶೇಖರ್, ದುಷ್ಯಂತ್ ಗೌಡ, ಕ್ರೀಡಾ ಭಾರತಿಯ ಮೋಹನ್, ಭಜರಂಗದಳ ಮುಖಂಡರುಗಳಾದ ಕೌಶಿಕ್, ಧರ್ಮೇಶ್, ಮಂಜು,ಪ್ರತಾಪ್, ಮುಂತಾದವರು ಹಾಜರಿದ್ದರು.

RELATED ARTICLES
- Advertisment -spot_img

Most Popular