ಸಕಲೇಶಪುರ: ತಾಲೂಕಿನ ಹೆತ್ತೂರು ಗ್ರಾಮ ಪಂಚಾಯತ್ ವತಿಯಿಂದ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಉಪಯೋಗಕ್ಕಾಗಿ ಸ್ಯಾನಿಟರಿ ಪ್ಯಾಡ್ ಸುಡುವ ಯಂತ್ರವನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಸೂಯಾ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಋತುಸ್ರಾವ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಕಿವಿ ಮಾತು ಹೇಳಿದರು. ಪ್ರಾಂಶುಪಾಲ ಬೆಟ್ಟದಹಳ್ಳಿ ಮಂಜುನಾಥ್, ಸಮಾಜಶಾಸ್ತ್ರ ಉಪನ್ಯಾಸಕಿ ವೇದಾವತಿ ಮೊದಲಾದವರು ಉಪಸ್ಥಿತರಿದ್ದರು.