Friday, April 4, 2025
Homeಸುದ್ದಿಗಳುಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

BREAKING :ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ಸದ್ಯ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದಾರೆ. ಅಶ್ಲೀಲ ವೀಡಿಯೋ ಪ್ರಕರಣದ ಕುರಿತು ಎಸ್‌ ಐಟಿ ತನಿಖೆ ನಡೆಸುತ್ತಿದ್ದು, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ರಿಲೀಸ್ ಮಾಡಿದ್ದು ಯಾರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದೆ.

ಅತ್ಯಾಚಾರ ಕೇಸ್​ನ ಉರುಳು ಪ್ರಜ್ವಲ್ ರೇವಣ್ಣಗೆ ಬೆಂಬಿಡದೆ ಕಾಡುತ್ತಿದ್ದು, ಇದೇ ಕೇಸ್ ಮಾಜಿ ಶಾಸಕ ಪ್ರೀತಂ ಗೌಡಗೆ ಸಂಕಷ್ಟ ತಂದೊಡ್ಡಿತ್ತು. ಪ್ರೀತಂ ಗೌಡ ವಿರುದ್ಧ ಅಶ್ಲೀಲ ದೃಶ್ಯ ಹಂಚಿಕೆ ಆರೋಪ ಮಾಡಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶಿಸಿದೆ.

ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರೀತಂ ಗೌಡ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದ್ದು, ತನಿಖೆ ಮುಂದುವರಿಸಲು ಎಸ್‌ಐಟಿಗೆ ತಿಳಿಸಿದೆ. ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಅರ್ಜಿಯ ವಾದ-ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಆದೇಶಿಸಿದೆ. ಅಶ್ಲೀಲ ದೃಶ್ಯ ಹಂಚಿಕೆ ಪ್ರಕರಣ ಸಂಬಂಧ ಮಾಜಿ ಶಾಸಕ ಪ್ರೀತಂ ಗೌಡ ಅವರು ತನಿಖೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ

RELATED ARTICLES
- Advertisment -spot_img

Most Popular