Sunday, March 16, 2025
Homeಸುದ್ದಿಗಳುಸಕಲೇಶಪುರರಾಷ್ಟ್ರೀಯ ಹೆದ್ದಾರಿ ಗುಂಡಿ ಮುಚ್ಚಿದ ಪುರಸಭೆ

ರಾಷ್ಟ್ರೀಯ ಹೆದ್ದಾರಿ ಗುಂಡಿ ಮುಚ್ಚಿದ ಪುರಸಭೆ

ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮುಚ್ಚಬೇಕಾದ ಪಟ್ಟಣ ವ್ಯಾಪ್ತಿಯ ಹೇಮಾವತಿ ಸೇತುವೆ ಸಮೀಪ ಬಿದ್ದಿರುವ ಹೆದ್ದಾರಿಯ ಗುಂಡಿಯನ್ನು ಪುರಸಭೆಯವರು ಮುಚ್ಚಿದರಿಂದ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರ ಹೇಮಾವತಿ ಸೇತುವೆಯ ಎರಡು ಬದಿಗಳಲ್ಲಿ ಭಾರಿ ಗಾತ್ರದ ಗುಂಡಿ ಬಿದ್ದು ವಾಹನ ಸವಾರರ ಸುಗಮ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿತ್ತು, ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರು ಗುತ್ತಿಗೆದಾರರಾಗಲಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಾಗಲಿ ಸ್ಪಂದಿಸಿರಲಿಲ್ಲ. ಇದನ್ನು ಮನಗಂಡ ಪುರಸಭೆಯವರು ಇಂದು ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಪುರಸಭೆಯ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ

RELATED ARTICLES
- Advertisment -spot_img

Most Popular