ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದಲ್ಲಿ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ರಾಜ್ಯದ ಶಾಲೆಗಳಲ್ಲಿ ಹಿಜಾಬ್ ನಿಷೇಧದ ನಿಯಮಗಳೇ ಜಾರಿಯಲ್ಲಿರುತ್ತದೆ ಎಂದು ಹೇಳಿದರು.
ಕರ್ನಾಟಕ ಹೈಕೋರ್ಟ್ ಈ ಹಿಂದೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿರ್ಬಂಧವನ್ನು ವಿಧಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಸುಪ್ರೀಂಕೋರ್ಟ್ ಅಂತಿಮ ತೀರ್ಪು ಹೊರ ಬೀಳುವವರೆಗೂ ಹೈಕೋರ್ಟ್ ನೀಡಿದ ಆದೇಶವೇ ಮುಂದುವರಿಯಲಿದೆ ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದರು
ವಿಸ್ತೃತ ಪೀಠದಿಂದ ಉತ್ತಮ ತೀರ್ಪಿನ ನಿರೀಕ್ಷೆ:
- “ಕರ್ನಾಟಕ ಶೈಕ್ಷಣಿಕ ಕಾಯ್ದೆ ಅಡಿಯಲ್ಲಿ ಬರುವ ಹಾಗೂ ರಾಜ್ಯ ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದಂತೆ ನಿಯಮಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕಿದೆ. ಅದೇ ನಿಯಮಗಳ ಪಾಲನೆಯನ್ನು ಮುಂದುವರಿಸಬೇಕಿದೆ. ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠವು ರಾಜ್ಯದ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉತ್ತಮ ತೀರ್ಪು ನೀಡುವುದು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ,” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದರು.