ಸಕಲೇಶಪುರ :ಇನ್ಮುಂದೆ ಆಸ್ಪತ್ರೆಯಲ್ಲಿ ರೋಗಿಗಳು ಕ್ಯೂ ನಿಲ್ಲಬೇಕಿಲ್ಲ, ಆನ್‌ಲೈನ್ ನೋಂದಣಿ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ ಎಂದು ಕ್ರಾಫರ್ಡ್ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ಬಂದಿದ್ದು ಒಟ್ಟಾರೆಯಾಗಿ ರಾಜ್ಗದ 15 ಆಸ್ಪತ್ರೆಗಳಲ್ಲಿ ಈ ಪದ್ದತಿಯನ್ನು ಅಳವಡಿಸಲಾಗಿದ್ದು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆ ಸಹ ಒಂದಾಗಿದೆ. ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಇದೇ ವ್ಯವಸ್ಥೆ ಜಾರಿ ಮಾಡಲಾಗಿದೆ
ಸಾರ್ವಜನಿಕ ಆಸ್ಪತ್ರೆಯಲ್ಲಿ ಜನ ದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್ ಸಂದೇಶದ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಸೂಚಿಸಿದೆ.ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ. ವೈದ್ಯರ ಆಪಾಯಿಂಟ್‌ಮೆಂಟ್ ಸಮಯ, ಯಾವ ವೈದ್ಯರುಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ. ಎಂದು ಮಾಹಿತಿಯಲ್ಲಿ ತಿಳಿಸಿದ್ದಾರೆ.