ಸಕಲೇಶಪುರ: ತಾಲೂಕು ಮಾನವ ಹಕ್ಕುಗಳ ರಕ್ಷಣಾ ಸಮಿತಿ ಅಧ್ಯಕ್ಷರಾಗಿ ಕೌಡಳ್ಳಿ ವಿಜಯ್ ಕುಮಾರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಜೀವನ್ ಗೌಡರವರು ವಿಜಯ್‌ಕುಮಾರ್‌ರವರ ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಜಿಲ್ಲಾಧ್ಯಕ್ಷ ಜೀವನ್ ಗೌಡ ಮಾತನಾಡಿ ತಾಲೂಕಿನಲ್ಲಿ ಹಲವು ಸಮಸ್ಯೆಗಳ ನಿವಾರಣೆಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಹೋರಾಟ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಸಂಘಟನೆಗೆ ಹೆಚ್ಚಿನ ಶಕ್ತಿ ಸಿಗಲಿ ಎಂದು ಸಂಘಟನೆಗೆ ತಾಲೂಕು ಅಧ್ಯಕ್ಷರ ನೇಮಕಾತಿ ಮಾಡಲಾಗಿದೆ ಎಂದರು. ಈ ಸಂಧರ್ಭದಲ್ಲಿ ಸಂಘಟನೆಯ ಕಾನೂನು ಸಂಚಾಲಕ ಪ್ರದೀಪ್, ಸಂಘಟನೆಯ ಪ್ರಮುಖರುಗಳಾದ ಮಹೇಶ್, ಮಂಜು, ಮಲ್ಲೇಶ್, ಕೊಲ್ಲಹಳ್ಳಿ ಬಾಲು, ಜಗ, ಪಸನ್ನ ಮುಂತಾದವರು ಹಾಜರಿದ್ದರು.