Sunday, November 24, 2024
Homeಸುದ್ದಿಗಳು5 ಕೆಜಿ ಅಕ್ಕಿ ಬದಲು ಹಣ ನೀಡಲು ಸಚಿವ ಸಂಪುಟ ಮಹತ್ವದ ನಿರ್ಧಾರ

5 ಕೆಜಿ ಅಕ್ಕಿ ಬದಲು ಹಣ ನೀಡಲು ಸಚಿವ ಸಂಪುಟ ಮಹತ್ವದ ನಿರ್ಧಾರ

5 ಕೆಜಿ ಅಕ್ಕಿ ಬದಲು ಹಣ ನೀಡಲು ಸಚಿವ ಸಂಪುಟ ಮಹತ್ವದ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರಾದ ಎಚ್​​ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಇದರೊಂದಿಗೆ, ಅನ್ನಭಾಗ್ಯಯೋಜನೆಯಡಿ ಬಿಪಿಎಲ್​ ಕಾರ್ಡ್​​ದಾರರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5ಕೆಜಿ ಅಕ್ಕಿಯ ಬದಲು ಹಣ ದೊರೆಯಲಿದೆ.

ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

RELATED ARTICLES
- Advertisment -spot_img

Most Popular