ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ 162 ಕ್ಕೆ ಏರಿಕೆಯಾಗಿದೆ. ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದ್ದು, 300ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಜಕಾರ್ತದ ಪಟ್ಟಣಗಳ ಬಳಿ ಭೂಕಂಪನದ ಕೇಂದ್ರಬಿಂದುವಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಕನಿಷ್ಠ 300 ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ. ಈಗಾಗಲೇ ಅವಶೇಷಗಳಡಿ ಸಿಕ್ಕ ಕೆಲವರಿಗೆ ಮೂಳೆ ಮುರಿತವಾಗಿದೆ ಎಂದು ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ಬ್ರಾಡ್‌ಕಾಸ್ಟರ್ ತಿಳಿಸಿದ್ದಾರೆ.
ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆಯೇ ಜನರು ಮನೆಗಳಿಂದ ಹೊರಬಂದಿದ್ದಾರೆ. ಹಾಗಾಗಿ ರಾಜಧಾನಿಯ ಯಾವುದೇ ಸಾವು ನೋವು ಸಂಭವಿಸಿಲ್ಲ. ನನ್ನ ಕೆಳಗೆ ನೆಲ ಅಲುಗಾಡಿದ ಅನುಭವವಾಯ್ತು. ಏನೆಂದು ನಾನು ಊಹಿಸುವ ಮುನ್ನ ಕಂಪನ ಹೆಚ್ಚಾಗುತ್ತಲೇ ಹೋಯ್ತು. ನಾನು 14ನೇ ಮಹಡಿಯಲ್ಲಿದ್ದೆ. ತಲೆಯೆಲ್ಲಾ ತಿರುಗಿದಂತಾಯ್ತು ಎಂದು ಕಾರ್ಮಿಕರೊಬ್ಬರು ಹೇಳಿದ್ದಾರೆ.