ಎತ್ತಿನಹೊಳೆ ಯೋಜನೆ ಉದ್ಘಾಟನೆ : ಬ್ಯಾನರ್ ನಲ್ಲಿ ಕಾರ್ಯಕ್ರಮದ ಅಧ್ಯಕ್ಷರ ಫೋಟೋ ಮಾಯಾ..!ಪ್ರತಿಭಟನೆ ನೆಡೆಸುವುದಾಗಿ ಬಿಜೆಪಿ ತಾಲೂಕು ಅಧ್ಯಕ್ಷರ ಎಚ್ಚರಿಕೆ.
ಸಕಲೇಶಪುರ : ಶುಕ್ರವಾರ ಉದ್ಘಾಟನೆಗೆ ಸಿದ್ದವಾಗಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ -01 ರ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಆರೋಪಿಸಿದ್ದಾರೆ.
ಮಲೆನಾಡು ಭಾಗದಿಂದ ಬಯಲು ಸೀಮೆಗೆ ಕುಡಿಯುವ ನೀರಿನ ಬೃಹತ್ ಯೋಜನೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಕ್ಷೇತ್ರದ ಪ್ರಥಮ ಪ್ರಜೆ,ಶಾಸಕರಾದ ಸಿಮೆಂಟ್ ಮಂಜು ರವರ ಫೋಟೋ ವನ್ನು ಬ್ಯಾನರ್ ನಲ್ಲಿ ಅಳವಡಿಸದೆ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಬ್ಯಾನರ್ ನಲ್ಲಿ ಕಾರ್ಯಕ್ರಮದ ಅಧ್ಯಕ್ಷರ ಭಾವಚಿತ್ರವನ್ನೇ ಮರೆತು ಅಳವಡಿಸಿದರೆ ಜನರಿಗೆ ತಪ್ಪು ಸಂದೇಶ ರವಾನೆವಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕೂಡಲೇ ಆಗಿರುವ ಲೋಪವನ್ನು ಸರಿಪಡಿಸದಿದ್ದರೆ. ಉದ್ಘಾಟನಾ ಸಮಾರಂಭದ ದಿನ ದಿನ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎತ್ತಿನ ಹೊಳೆ ಯೋಜನೆಯ ಕಾಮಗಾರಿಗೆ ಎಲ್ಲಾ ಸರ್ಕಾರಗಳು ಅನುದಾನ ನೀಡಿದೆ. ಆದರೆ ಕಾಂಗ್ರೆಸ್ ಸರ್ಕಾರ ಒಂದು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿಕೊಳ್ಳುವುದು ತಪ್ಪು ಎಂದು ತಿಳಿಸಿದ್ದಾರೆ.


                                    
