Tuesday, April 8, 2025
Homeಸುದ್ದಿಗಳುರಾಜ್ಯಎಸ್.ಸಿ-ಎಸ್.ಟಿ ಮೀಸಲಾತಿ ಹೆಚ್ಚಳ:ಸಿಮೆಂಟ್ ಮಂಜುನಾಥ್ ಅಭಿನಂದನೆ ಸಲ್ಲಿಕೆ.

ಎಸ್.ಸಿ-ಎಸ್.ಟಿ ಮೀಸಲಾತಿ ಹೆಚ್ಚಳ:ಸಿಮೆಂಟ್ ಮಂಜುನಾಥ್ ಅಭಿನಂದನೆ ಸಲ್ಲಿಕೆ.

ಸಕಲೇಶಪುರ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಜಾರಿಯ ಕುರಿತು ಇಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಯಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚಳ ಮಾಡಿ ಘೋಷಣೆ ಮಾಡಿರುವುದಕ್ಕೆ ಸಕಲೇಶಪುರ, ಆಲೂರು ಹಾಗೂ ಕಟ್ಟಾಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಿಮೆಂಟ್ ಮಂಜುನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಪರಿಶೀಲಿಸಿ ನಂತರ ವರದಿಯು ನ್ಯಾಯತವಾಗಿದೆ ಎಂದು ಮೀಸಲಾತಿ ಹೆಚ್ಚಿಸಿರುವ ರಾಜ್ಯದ ಜನಪ್ರಿಯ ಬಿಜೆಪಿ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರುಗಳಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.

RELATED ARTICLES
- Advertisment -spot_img

Most Popular