ಭಾರತದ ಪ್ರಜಾಪ್ರಭುತ್ವ, ಸಂವಿಧಾನ ವಿಶ್ವಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು.
ಸಕಲೇಶಪುರ : ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದ್ದು, ಕೋಟ್ಯಾಂತರ ಜನರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅತ್ಯುತ್ತಮ ಪ್ರಜಾತಂತ್ರ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಭಾನುವಾರ ತಾಲೂಕು ಪಂಚಾಯತಿ, ಆನೆಮಹಲ್ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಜರಾಬಾದ್ ಕೋಟೆಯಲ್ಲಿ ಏರ್ಪಡಿಸಲಾಗಿದ್ದ ಪ್ರಜಾಪ್ರಭುತ್ವದ ಅಂತರಾಷ್ಟ್ರೀಯ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು,
ಸಾಮಾನ್ಯ ವ್ಯಕ್ತಿಯೂ ಅತ್ಯುನ್ನತ ಸ್ಥಾನವನ್ನು ಅಲಂಕರಿಸುವುದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯಾಗಿದೆ.
ಭಾರತೀಯ ಪ್ರಜಾಪ್ರಭುತ್ವ ಹಾಗೂ ಸಂವಿಧಾನವು ಜಗತ್ತಿನಲ್ಲಿ ಪರಿಪೂರ್ಣ ಉದಾಹರಣೆಯಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ ದಶಕದಲ್ಲಿ ಹಲವು ಬದಲಾವಣೆಗಳಾಗಿವೆ ಎಂದು ಹೇಳಿದರು. 2047ರ ವೇಳೆಗೆ ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಯಾಗಲಿದೆ.ಭಾರತೀಯ ಸಂಸ್ಕೃತಿ ಬೆಳೆದು ಬಂದ ದಾರಿ ವಿವಿಧ ಧರ್ಮ, ಜಾತಿ, ಸಂಪ್ರಾದಾಯ ಆಚಾರ, ವಿಚಾರಗಳನ್ನು ಒಳಗೊಂಡ ಭಾರತ ವಿಶ್ವದ ಬೃಹತ್ ಪ್ರಜಾ ಪ್ರಭುತ್ವ ರಾಷ್ಟ್ರ ಭಾರತೀಯರ ಏಕತೆ, ವಿಶ್ವಕ್ಕೆ ಮಾದರಿ ಎನಿಸಿದೆ ಎಂದರು.
ಇದೆ ವೇಳೆ ಸಂವಿಧಾನ ಪೀಠಿಕೆಯನ್ನು ಓದಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ಈ ಸಂಧರ್ಭದಲ್ಲಿ ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಂಗಾಧರನ್, ಸಹಾಯಕ ನಿರ್ದೇಶಕರಾದ ಆದಿತ್ಯ,ಹರೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಹಾರ ಸಲೀಮ್, ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು,ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.