Friday, November 22, 2024
Homeಸುದ್ದಿಗಳುಸಕಲೇಶಪುರಜೆಡಿಎಸ್ ಪಕ್ಷದಿಂದ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಆಪರೇಷನ್

ಜೆಡಿಎಸ್ ಪಕ್ಷದಿಂದ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಆಪರೇಷನ್

ಆಪರೇಷನ್ ಜೆಡಿಎಸ್ ಗೆ ಪಟ್ಟಣದ ನೂರಾರು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು.
ಸಕಲೇಶಪುರ:ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರು ಭರ್ಜರಿ ಆಪರೇಷನ್ ಪಟ್ಟಣದಲ್ಲಿ ನಡೆಸಿದ್ದು ಬಾರಿ ಸಂಖ್ಯೆಯಲ್ಲಿ ಪಟ್ಟಣದ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಮಾಜಿ ಜಿ.ಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಪಟ್ಟಣದ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಶಾಸಕ ಎಚ್.ಕೆ ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಹಾಗೂ ಪಕ್ಷದ ಸಿದ್ಧಾಂತ ಮೆಚ್ಚಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಸೇರ್ಪಡೆಯಾದರು.
ಈ ಸಂಧರ್ಭದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಮಂಜು ಮಾತನಾಡಿ ಶಾಸಕರು ಮೃದು ಸ್ವಭಾವದವರಾಗಿದ್ದು ಅವರು ಪ್ರಚಾರ ಪ್ರಿಯರಲ್ಲ.ಅವರು ಸದ್ದಿಲ್ಲದೆ ತಾಲೂಕಿನಲ್ಲಿ ಅಭಿವೃದ್ದಿ ಕೆಲಸಗಳನ್ನು ಮಾಡುತ್ತಿದ್ದಾರೆ. ಪಟ್ಟಣದ ಕೆಲವೊಂದು ಅಭಿವೃದ್ದಿ ಕಾರ್ಯಗಳನ್ನು ಮಾಡುವಂತೆ ನಾವು ಒತ್ತಾಯಿಸಿದ್ದು ಅದಕ್ಕೆ ಪೂರಕವಾಗಿ ಅವರು ಸ್ಫಂದನೆ ಮಾಡಿರುವುದರಿಂದ ನಾವೆಲ್ಲಾ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿದ್ದೇವೆ ಎಂದರು.
ಶಾಸಕ ಎಚ್.ಕೆ ಕುಮಾರಸ್ವಾಮಿ ಮಾತನಾಡಿ ಬಿಜೆಪಿ ಹಾಗೂ ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಹಲವು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇಂದು ಷರತ್ತು ಬದ್ದವಾಗಿ ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಪಟ್ಟಣದ ಕ್ರೀಡಾಂಗಣ ಅಭಿವೃದ್ದಿ, ಮುಖ್ಯರಸ್ತೆ ಅಗಲಿಕರಣ, ಶುದ್ದ ಕುಡಿಯುವ ನೀರು ಪೂರೈಕೆ ಸೇರಿದಂತೆ ಇನ್ನು ಹಲವು ಬೇಡಿಕೆಗಳನ್ನು ಇಟ್ಟು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸೇರ್ಪಡೆಯಾಗಿದ್ದಾರೆ. ಅವರ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸಲಾಗುತ್ತದೆ. ಪಕ್ಷಕ್ಕೆ ಸೇರ್ಪಡೆಯಾದವರನ್ನು ಗೌರವಾಯುತವಾಗಿ ನಡೆಸಿಕೊಳ್ಳಲಾಗುತ್ತದೆ ಎಂದರು. ಬಿಜೆಪಿ ಪಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದ್ದು ಈ ಹಿನ್ನೆಲೆಯಲ್ಲಿ ಯುವಕರು ಬೇಸತ್ತು ಸ್ವಯಂಪ್ರೇರಿತರಾಗಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತೊರೆದು ದೀಪು, ಆದರ್ಶ, ಹೇಮಂತ್ ಗೌಡ, ಯತೀಶ್, ಪ್ರದೀಪ್, ಉಮೇಶ್, ಹರೀಶ್, ಕೃಷ್ಣ, ಮುಂತಾದವರು ಜೆಡಿಎಸ್ ಸೇರ್ಪಡೆಯಾದರು.
ಈ ವೇಳೆ ಮಾಜಿ ಜಿ.ಪಂ ಸದಸ್ಯರುಗಳಾದ ಚಂಚಲಾ ಕುಮಾರಸ್ವಾಮಿ, ಸುಪ್ರದೀಪ್ತ್ ಯಜಮಾನ್, ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಲ್ ಸೋಮಶೇಖರ್, ಮಳಲಿ ಗ್ರಾ.ಪಂ ಅಧ್ಯಕ್ಷ ಕೊಲ್ಲಹಳ್ಳಿ ಸತೀಶ್, ಪುರಸಭಾ ಸದಸ್ಯರುಗಳಾದ ಪ್ರಜ್ವಲ್, ಇಸ್ರಾರ್, ಮೋಹನ್, ಉಮೇಶ್, ಜೆಡಿಎಸ್ ಮುಖಂಡ ಬೆಕ್ಕನಹಳ್ಳಿ ನಾಗರಾಜ್ , ಸ.ಭಾ ಭಾಸ್ಕರ್, ಸೂರ್ಯ ಮುಂತಾದವರು ಹಾಜರಿದ್ದರು.

RELATED ARTICLES
- Advertisment -spot_img

Most Popular