ಸಕಲೇಶಪುರ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಶಾಸಕ ಎಚ್.ಕೆ ಕುಮಾರಸ್ವಾಮಿ ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಡನೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಮೆರವಣಿಗೆಯಲ್ಲಿ ನಾಸಿಕ್ ಬಾಂಡ್, ಚಂಡೆ ವಾದ್ಯಗಳನ್ನು ಬಳಸಲಾಗಿತ್ತು.ಈ ಸಂಧರ್ಭದಲ್ಲಿ ಜಿ.ಪಂ ಮಾಜಿ ಸದಸ್ಯೆ ಚಂಚಲಾ ಕುಮಾರಸ್ವಾಮಿ ,ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಲ್ ಸೋಮಶೇಖರ್ ಮತ್ತಿತರ ಮುಖಂಡರು ಹಾಜರಿದ್ದರು. ಸಕಲೇಶಪುರ , ಆಲೂರು, ಕಟ್ಟಾಯ ಸೇರಿದಂತೆ ವಿವಿಧ ಭಾಗಗಳಿಂದ ಕಾರ್ಯಕರ್ತರು ಆಗಮಿಸಿದ್ದರು.