Friday, April 4, 2025
Homeಸುದ್ದಿಗಳುಗ್ರಾಮೀಣಮೂಡಿಗೆರೆ ಭಾಗದಲ್ಲಿ ಐದು ಕಾಡಾನೆ ಹಿಡಿಯಲು ಮುಖ್ಯಮಂತ್ರಿ ಆದೇಶ ; ಸಕಲೇಶಪುರ ಭಾಗದಲ್ಲಿ ಕಾಡಾನೆ ಸೆರೆಗೆ...

ಮೂಡಿಗೆರೆ ಭಾಗದಲ್ಲಿ ಐದು ಕಾಡಾನೆ ಹಿಡಿಯಲು ಮುಖ್ಯಮಂತ್ರಿ ಆದೇಶ ; ಸಕಲೇಶಪುರ ಭಾಗದಲ್ಲಿ ಕಾಡಾನೆ ಸೆರೆಗೆ ಅನುಮತಿ ನೀಡದ ಸರ್ಕಾರ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನ ವ್ಯಾಪ್ತಿಯಲ್ಲಿ 5 ಕಾಡಾನೆಗಳನ್ನು ಹಿಡಿಯಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು ಅದಕ್ಕೆ ಸ್ಪಂದಿಸಿರುವ ಬಸವರಾಜ ಬೊಮ್ಮಾಯಿ ಅರಣ್ಯ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯವರು ತಿಳಿಸಿದ್ದಾರೆ.

ಈ ಬಗ್ಗೆ  ಮಾಹಿತಿ ನೀಡಿರುವ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಮಂಗಳವಾರ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ.

ಕಳಸ ತಾಲೂಕು ವ್ಯಾಪ್ತಿಯಲ್ಲಿ 2 ಕಾಡಾನೆಗಳು ಮತ್ತು ಮೂಡಿಗೆರೆ ತಾಲ್ಲೂಕಿನ ಕುಂದೂರು ಹಾಗೂ ಊರುಬಗೆ ವ್ಯಾಪ್ತಿಯಲ್ಲಿ 3 ಕಾಡಾನೆಗಳು ಒಟ್ಟು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನರಿಗೆ ತುಂಬಾ ತೊಂದರೆ ಕೊಡುತ್ತಾ ಹಾವಳಿ ಮಾಡುತ್ತಿರುವ 5 ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಮನವಿ ಮಾಡಿರುತ್ತೇನೆ.

ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಅವರು ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು (ಪಿಸಿಸಿಎಫ್) ಮತ್ತು ಚಿಕ್ಕಮಗಳೂರು ಜಿಲ್ಲಾ ಅರಣ್ಯ ಅಧಿಕಾರಿ(ಸಿಸಿಎಫ್)ಗಳಿಗೆ ಶಿಪಾರಸ್ಸು ನೀಡಿರುತ್ತಾರೆ.
ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಿ ಆದಷ್ಟು ಬೇಗ ಜಾರಿಗೆ ತರಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮೂಡಿಗೆರೆ ಭಾಗದಲ್ಲಿ 5 ಕಾಡಾನೆಗಳನ್ನು ಹಿಡಿಯಲು ಅನುಮತಿ ಕೊಟ್ಟಿರುವ ಸರ್ಕಾರ ಸಕಲೇಶಪುರ ಭಾಗದಲ್ಲಿ ಕಾಡಾನೆಗಳನ್ನು ಹಿಡಿಯಲು ಅನುಮತಿ ನೀಡದಿರುವುದು ಸಕಲೇಶಪುರ ತಾಲೂಕಿನ ಬೆಳೆಗಾರರ ಬೇಸರಕ್ಕೆ ಕಾರಣವಾಗಿದೆ.

RELATED ARTICLES
- Advertisment -spot_img

Most Popular