ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕರಡಿಗಾಲ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಗ್ರಾಮದ ಮದನ್ ಹಾಗೂ ಶಂಬುಗೌಡ ಎಂಬುವರ ತೋಟ ಗದ್ದೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಅಪಾರ ಪ್ರಮಾಣದ ಬಾಳೆ ,ಅಡಿಕೆ ,ಭತ್ತ ಬೆಳೆ ನಾಶವಾಗಿದೆ.
ಅರಣ್ಯ ಅಧಿಕಾರಿಗಳು ಆನೆಗಳನ್ನು ಸ್ಥಳಾಂತರ ಮಾಡುವಲ್ಲಿ ವಿಫಲರಾಗಿದ್ದಾರೆ. ಸರ್ಕಾರ ಕಣ್ಮುಚ್ಚಿ ಕುಳಿತಿದೆ.ಹಾಸನದ ಸಂಸದರು ಕಣ್ಮರೆಯಾಗಿದ್ದಾರೆ. ಆನೆ ದಾಳಿಯಿಂದ ಮೃತಪಟ್ಟವರ ಮನೆಗೆ ಭೇಟಿ ನೀಡಿಲ್ಲ ಹಾಗೂ ಬೆಳೆಗಳು ಹಾನಿಯಾದ ಪ್ರದೇಶಕ್ಕೂ ಭೇಟಿ ಕೊಟ್ಟಿಲ್ಲ ಹೀಗೆ ಆನೆಗಳ ನಿರಂತರ ದಾಳಿಯಿಂದಾಗಿ ಇನ್ನೇನು ಕೆಲವೇ ದಿನಗಳಲ್ಲಿ ಕಟಾವಿಗೆ ಬರಬೇಕಾದ ಭತ್ತ ,ಕಾಫಿ ,ಅಡಿಕೆ ಬೆಳೆಗಳು ನಾಶವಾಗಿ ಕೈಗೆ ಬಂದಂತ ತುತ್ತು ಬಾಯಿಗೆ ಬರದಂತಾಗುವುದರಲ್ಲಿ ಅನುಮಾನವಿಲ್ಲ.ಮುಂದಿನ ದಿನಗಳಲ್ಲಿ ಇದೇ ರೀತಿ ಮುಂದುವರೆದಲ್ಲಿ ರೈತರು ಪಡೆದಿರುವ ಸಾಲವನ್ನು ಕಟ್ಟಲಾಗದೆ ಆತ್ಮಹತ್ಯೆ ಹಾದಿ ಹಿಡಿಯಬೇಕಾಗುತ್ತದೆ ಎಂದು ರೈತ ಮದನ್ ಕರಡಿಗಾಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.