ಸಕಲೇಶಪುರ: ತಾಲೂಕಿನ ಬೆಳಗೋಡು ಹೋಬಳಿಯಲ್ಲಿ ಕಾಡಾನೆಗಳ ಉಪದ್ರವ ಮುಂದುವರೆದಿದ್ದು ಹೆಬ್ಬನಹಳ್ಳಿ ಗ್ರಾಮದ ಗದ್ದೆಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿರುವುದರಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಫಸಲಿಗೆ ಬಂದಿರುವ ಭತ್ತದ ಗದ್ದೆಗಳಲ್ಲಿ ಕಾಡಾನೆಗಳು ದಾಂದಲೆ ನಡೆಸುತ್ತಿರುವುದರಿಂದ ಕಷ್ಟ ಪಟ್ಟು ಬೆಳೆ ಬೆಳೆದ ರೈತರು ಅತಂಕಕ್ಕೀಡಾಗಿದ್ದಾರೆ. ಕೂಡಲೆ ಕಾಡಾನೆ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೆಳಗೋಡು ಹೋಬಳಿ ಕರವೇ ಮುಖಂಡ. ಬಸವರಾಜ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿ