ಸಕಲೇಶಪುರ: ತಾಲೂಕಿನ ಹೆತ್ತೂರು ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವತಿಯಿಂದ ಸರಳವಾಗಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಲತಾ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿಯಾದ ಶಾರದಾ,SDMC ಸದಸ್ಯರಾದ ಕರಡಿಗಾಲ ಹರೀಶ್ ಕನಕದಾಸರ ಜೀವನ ಚರಿತ್ರೆ ಬಗ್ಗೆ ಮಕ್ಕಳಿಗೆ ತಿಳಿಸಿದರು .ಶಿಕ್ಷಕಿ ಶೋಭಾ ಕನಕದಾಸರ ಕೀರ್ತನೆಗಳನ್ನು ಮಕ್ಕಳಿಗೆ ಹೇಳಿಕೊಟ್ಟರು. ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಭಾಗದ ಎಲ್ಲ ಶಿಕ್ಷಕರುಗಳು ಭಾಗವಹಿಸಿದ್ದರು.
ತಾಜಾ ಸುದ್ದಿ