Monday, March 24, 2025
Homeಸುದ್ದಿಗಳುಸಕಲೇಶಪುರಒಂದೆಡೆ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ ಮತ್ತೊಂದೆಡ ಸಂಭ್ರಮದ ರಾಜ್ಯೋತ್ಸವ : ಗೊಂದಲಕ್ಕೆ ಸಿಲುಕಿದ ತಾಲೂಕು...

ಒಂದೆಡೆ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ ಮತ್ತೊಂದೆಡ ಸಂಭ್ರಮದ ರಾಜ್ಯೋತ್ಸವ : ಗೊಂದಲಕ್ಕೆ ಸಿಲುಕಿದ ತಾಲೂಕು ಆಡಳಿತ

ಸಕಲೇಶಪುರ: ಕಾಡಾನೆ ದಾಳಿಯಿಂದಾಗಿ ವ್ಯಕ್ತಿಯೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಸಂಭ್ರಮದಿಂದ ಭಾಗಿಯಾಗಬೇಕಾಗಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಆತಂಕದಲ್ಲಿ ಭಾಗಿಯಾಗಬೇಕಾಯಿತು.


ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ರಾಷ್ಟ್ರ ಧ್ವಜದ ಧ್ವಜಾರೋಹಣ ನಡೆಸಿದರೆ ಶಾಸಕ ಎಚ್.ಕೆ ಕುಮಾರಸ್ವಾಮಿ ನಾಡ ಧ್ವಜಾರೋಹಣ ನಡೆಸಿದರು.ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆಯಿಂದ ಕಲಾ ತಂಡಗಳು ಆಗಮಿಸಿದ್ದವು.ಪಟ್ಟಣದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಲು ಆಗಮಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಪ್ರಮುಖ ಆಕರ್ಷಣೆಯಾಗಿದ್ದರು.

RELATED ARTICLES
- Advertisment -spot_img

Most Popular