ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಮತ್ತು ಸ್ವಯಂ ರಕ್ಷಣಾ ಕೌಶಲ್ಯ ಕಲಿಸಲು ಆಸಕ್ತ ಅಧಿಕೃತ ಪ್ರಮಾಣ ಪತ್ರ ಹೊಂದಿರುವ ಕರಾಟೆ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ಅರ್ಹ ತರಬೇತಿ ಸಂಸ್ಥೆಯವರು ಹೆತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇಲ್ಲಿ ಡಿಸೆಂಬರ್ 30ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿವಾಗಿದೆ ಹೆಚ್ಚಿನ ವಿವರಗಳಿಗೆ ಪ್ರಾಂಶುಪಾಲರನ್ನು ಸಂಪರ್ಕಿಸ ಬಹುದಾಗಿದೆ
ಬಾಲಕೀಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮವಿಶ್ವಾಸ ಮೂಡಿಸಲು ಹಾಗೂ ಸ್ವಯಂ ರಕ್ಷಣೆಗಾಗಿ ಆತ್ಮ ರಕ್ಷಣಾ ಕಲೆ, ಕರಾಟೆ ತರಬೇತಿ ನೀಡುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯೇ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.