ಹಾಸನ ಉಸ್ತುವಾರಿ ಸಚಿವರಾಗಿ ಕೃಷ್ಣ ಬೈರೇಗೌಡ ನೇಮಕ – ಶಾಸಕ ಸಿಮೆಂಟ್ ಮಂಜು ಅಭಿನಂದನೆ
ಬೆಂಗಳೂರು: ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಸಚಿವರ ಕಚೇರಿಯಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಕೃಷ್ಣ ಬೈರೇಗೌಡರನ್ನು ಭೇಟಿಯಾಗಿ ಹೃತ್ಪೂರ್ವಕವಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯತ್ತ ಜಿಲ್ಲೆ ಸಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ ಸಿಮೆಂಟ್ ಮಂಜು, ಸಚಿವ ಕೃಷ್ಣ ಬೈರೇಗೌಡ ಕಂದಾಯ ಸಚಿವರಾಗಿದ್ದು ವಿಶೇಷವಾಗಿ ತಾಲ್ಲೂಕು ಮಟ್ಟದಲ್ಲಿ ಎದುರಾಗುತ್ತಿರುವ ಕಂದಾಯ ಸಂಬಂಧಿತ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವರನ್ನು ಮನವಿ ಮಾಡಿದರು.
ಹಾಸನ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆ ಪಡೆಯುತ್ತಿರುವ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಜಿಲ್ಲೆಗೆ ನೂತನ ಉತ್ತೇಜನ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.