Sunday, November 24, 2024
Homeಸುದ್ದಿಗಳುಸಕಲೇಶಪುರಕುವೆಂಪುರವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ತಹಶೀಲ್ದಾರ್ ಮೇಘನ

ಕುವೆಂಪುರವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ತಹಶೀಲ್ದಾರ್ ಮೇಘನ

ಸಕಲೇಶಪುರ :  ವಿಶ್ವಮಾನವ ಕುವೆಂಪು ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ  ತಹಶೀಲ್ದಾರ್ ಮೇಘನ ಹೇಳಿದರು
   ರಾಷ್ಟ್ರೀಯ ಹಬ್ಬಗಳ ಆಚರಣ ಸಮತಿ ಮತ್ತು ತಾಲ್ಲೂಕು ಅಡಳಿತ ವತಿಯಿಂದ  ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಅವರ 119ನೇ ಜನ್ಮ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುವೆಂಪು ಅವರ ಅದರ್ಶ ಎಲ್ಲರಿಗೂ ಮಾದರಿಯಾಗಬೇಕು, ಕುವೆಂಪು ಯಾವುದೇ ಜಾತಿಗೆ ಸೇರಿಲ್ಲದವರಾಗಿದ್ದಾರೆ. ವೈಚಾರಿಕ ಪ್ರಜ್ಞೆಯೊಂದಿಗೆ ಪೂರ್ಣ ಅರಳಿದ ಬದುಕು ಅವರದಾಗಿತ್ತು. ಅವರು ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರಾಗಿ ಉಳಿದದರು. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ವ್ಯಕ್ತಿಯ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದರು.
ಪುರಸಭ ಅಧ್ಯಕ್ಷ ಕಾಡಪ್ಪ ಮಾತನಾಡಿ, ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ, ಆ ನಂತರ ಆ ಮಗುವನ್ನು ಜಾತಿ ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್, ಶಿರಸ್ತೇದಾರ್ ಉಮೇಶ್, ಇನ್ನಿತರರು ಇದ್ದರು
RELATED ARTICLES
- Advertisment -spot_img

Most Popular