ಕರ್ನಾಟಕ: ಸೋಮವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆ ಲಘು ಮಳೆಯಾಯಿತು. ಉಳಿದಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಉತ್ತರ ಒಳನಾಡಿನ ಒಂದೆರಡು ಕಡೆ ಗರಿಷ್ಠ ತಾಪಮಾನ ಗಮನಾರ್ಹವಾಗಿ ಹೆಚ್ಚಾಗಿದ್ದರೆ. ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಕೊಂಚ ಅಧಿಕವಾಗಿತ್ತು. ಉಳಿದಂತೆ ಕರಾವಳಿಯಾದ್ಯಂತ, ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಗುಷ್ಠ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬರಲಿಲ್ಲ. ಇದೇ ವೇಳೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಕನಿಷ್ಠತಾಪಮಾನ ಕೊಂಚ ಹೆಚ್ಚಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಾದ್ಯಂತ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಕನಿಷ್ಟ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬರಲಿಲ್ಲ, ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 32.4ಡಿ. ಸೆ. ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲಿಯೇ ಕನಿಷ್ಠ 17.6 ಡಿ.ಸೆ. ತಾಪಮಾನ ದಾಖಲಾಯಿತು. ಮಂಗಳವಾರ ಬೆಳಗ್ಗೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಒಳನಾಡಿನ ಹಲವೆಡೆ ಮತ್ತು ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಮಿಂಚು-ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.ಸಕಲೇಶಪುರ