ನಾಳೆ (ಮಂಗಳವಾರ) ಹಾಸನ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ.
ಜಿಲ್ಲಾಧಿಕಾರಿ ಅರ್ಚನರಿಂದ ಆದೇಶ
ಸಕಲೇಶಪುರ : ನಾಳೆ ಹಾಸನ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಹನುಮ ಜಯಂತಿ ಕಾರ್ಯಕ್ರಮದ ಅಂಗವಾಗಿ ಬೃಹತ್ ಶೋಭ ಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಹಾಸನ ನಗರ ವ್ಯಾಪ್ತಿಗೆ ಒಳಪಟ್ಟಂತೆ ಮದ್ಯ ಮಾರಾಟ ನಿಷೇಧ ಗೊಳಿಸಿ ಜಿಲ್ಲಾಧಿಕಾರಿ ಅರ್ಚನಾ ಆದೇಶ ಹೊರಡಿಸಿದ್ದಾರೆ.
ಬೃಹತ್ ಶೋಭ ಯಾತ್ರೆಗೆ 15 ಸಾವಿರಕ್ಕೂ ಹೆಚ್ಚು ಜನರು ಸೇರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಿನಾಂಕ 10-01-2023 ಬೆಳಿಗ್ಗೆ 6:00 ಗಂಟೆಯಿಂದ ಮಧ್ಯರಾತ್ರಿ 12:00 ಹೊರಗೆ ಮದ್ಯ ಮಾರಾಟ ನಿಷೇಧ ಗೊಳಿಸಿ ಆದೇಶ ಹೊರಡಿಸಲಾಗಿದೆ