Sunday, November 24, 2024
Homeಸುದ್ದಿಗಳುಸಕಲೇಶಪುರಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ : ಮಹಾ ಅಪರಾಧವೆಂದ ಮಾಳವಿಕಾ ಅವಿನಾಶ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ : ಮಹಾ ಅಪರಾಧವೆಂದ ಮಾಳವಿಕಾ ಅವಿನಾಶ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ : ಮಹಾ ಅಪರಾಧವೆಂದ ಮಾಳವಿಕಾ ಅವಿನಾಶ್

 ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಮಾಳವಿಕಾ

ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ಬಿರುಸಿನ ಪ್ರಚಾರ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಾಳವಿಕಾ ಅವಿನಾಶ್,

ಕಾಂಗ್ರೆಸ್ ಪಕ್ಷದಲ್ಲಿ ಇಂದಿನಿಂದಲೂ ಓಲೈಕೆ ರಾಜಕಾರಣದ ಸಂಸ್ಕೃತಿವಿದೆ ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ. ಪಿ ಎಫ್ ಐ ಸಂಘಟನೆ ನಮ್ಮ ಹಾಗೂ ನೆರೆ ರಾಜ್ಯಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದೆ ದೇಶವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದೆ ಬಿಜೆಪಿಯ ಹಲವಾರು ಕಾರ್ಯಕರ್ತರ ಮಾರಣ ಹೋಮ ನಡೆಸಿದ್ದಾರೆ. ಇಂಥ ಚಟುವಟಿಕೆಗಳಲ್ಲಿ ಪಾಲ್ಗೊಂಡ ಕಾರ್ಯಕರ್ತರನ್ನು ಸಿದ್ದರಾಮಯ್ಯನವರ ಆಡಳಿತದ ಅವಧಿಯಲ್ಲಿ ಬಿಡುಗಡೆಗೊಳಿಸುತ್ತಾರೆ. ಪಿ ಎಫ್ ಐ ನಡೆಸಿರುವ ದುಷ್ಕೃತ್ಯಗಳ ಹಿನ್ನೆಲೆಯಲ್ಲಿ ನಿಷೇಧ ಮಾಡುತ್ತಿದ್ದಾರೆ ಆದರೆ ಸಾಂಸ್ಕೃತಿಕವಾಗಿ ಹಾಗೂ ಧಾರ್ಮಿಕವಾಗಿ ಕೆಲಸ ಮಾಡುತ್ತಿರುವ ಬಜರಂಗದಳ ಸಂಘಟನೆಯನ್ನು ದೇಶ ವಿರೋಧಿ ಸಂಘಟನೆಯಾದ ಪಿಎಫ್ ಐ ಜೊತೆ ಹೋಲಿಕೆ ಮಾಡಿ ನಿಷೇಧ ಮಾಡುತ್ತೇವೆ ಎನ್ನುವುದು ಮಹಾ ಅಪರಾಧವಾಗಿದೆ. ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಹಾಗಾಗಿ ನಿಷೇಧದ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಕಾಂಗ್ರೆಸ್ ಪಕ್ಷ ಬಜರಂಗದಳ ನಿಷೇಧ ಮಾಡುವ ಪ್ರಯತ್ನ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ ಏಕೆಂದರೆ ರಾಜ್ಯದ ಜನ ಬುದ್ಧಿವಂತರಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.  

RELATED ARTICLES
- Advertisment -spot_img

Most Popular