ಸಕಲೇಶಪುರ: ಈ ಬಾರಿ ಸಕಲೇಶ್ವರಸ್ವಾಮಿ ಸ್ವಾಮಿ ರಥೋತ್ಸವ ಹಾಗೂ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲಾಗುವುದೆಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆ ಹಾಗೂ ಸಕಲೇಶ್ವರ ಸ್ವಾಮಿ ದೇವಸ್ಥಾನದ ಉತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿ ಮುಂಬರುವ ಫ್ರೆಬ್ರವರಿ 5 ಹಾಗೂ 6 ರಂದು ಇತಿಹಾಸ ಪ್ರಸಿದ್ದ ಸಕಲೇಶ್ವರಸ್ವಾಮಿ ರಥೋತ್ಸವ ಹಾಗೂ ದನಗಳ ಜಾತ್ರೆ ಮತ್ತು ವಸ್ತುಪ್ರದರ್ಶನ ನಡೆಯಲಿದ್ದು ಇದನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂಧರ್ಭದಲ್ಲಿ ತಹಸೀಲ್ದಾರ್ ಮೇಘನ, ಸಕಲೇಶ್ವರಸ್ವಾಮಿ ದೇವಸ್ಥಾನದ ಉತ್ಸವ ಸಮಿತಿಯ ಅಧ್ಯಕ್ಷ ನಂದಿಕೃಪ ರಾಜು, ಪದಾಧಿಕಾರಿಗಳಾದ ಬ್ಯಾಕರವಳ್ಳಿ ಜಯಣ್ಣ, ಅವಿನಾಶ್, ರವಿಕುಮಾರ್, ದೇವಸ್ಥಾನದ ಅರ್ಚಕ ಸೋಮೇಶ್ ಸೇರಿದಂತೆ ಇತರರು ಹಾಜರಿದ್ದರು