ಸಕಲೇಶಪುರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಕಳೆದ ನವೆಂಬರ್ 1 ರಂದು ಕಾಡಾನೆ ದಾಳಿಯಿಂದ ಮೃತಪಟ್ಟ ಮನುವಿನ ಕುಟುಂಬವನ್ನು ಭೇಟಿ ನೀಡಿ ಈ ಹಿಂದೆ ಭರವಸೆ ನೀಡಿದಂತೆ ವೈಯುಕ್ತಿಕವಾಗಿ ಅವರ ಮಹಾಲಕ್ಷ್ಮೀ ಎಜುಕೇಷನ್ ಟ್ರಸ್ಟ್ ವತಿಯಿಂದ ಮೃತ ಮನು ಪತ್ನಿಗೆ 2 ಲಕ್ಷ ರೂಗಳನ್ನು ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು. ಈ ಸಂಧರ್ಭದಲ್ಲಿ ಅವರು ಮಾತನಾಡಿ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ವಿಪರೀತ ತೊಂದರೆಗಳಾಗುತ್ತಿದ್ದು ಈ ನಿಟ್ಟಿನಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಸಕಲೇಶಪುರ ಆಲೂರು ತಾಲೂಕಿನಲ್ಲಿ ಸುಮಾರು 20ಕಿ.ಮೀ ರೈಲ್ವೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗುತ್ತಿದೆ ಅಲ್ಲದೆ ಕಾಡಾನೆಗಳನ್ನು ತಕ್ಷಣ ಓಡಿಸಲು ಕಾಡಾನೆ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದೆ ಎಂದರು. ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್, ಮಾಜಿ ಶಾಸಕ ಎಚ್.ಎಂ ವಿಶ್ವನಾಥ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಶಶಿಕುಮಾರ್ ಹಾಜರಿದ್ದರು.
ತಾಜಾ ಸುದ್ದಿ