ಧರ್ಮಸ್ಥಳದ ವಿರುದ್ಧ ಅಪಪ್ರಚಾರ :ಸಿಬಿಐ ತನಿಖೆಗೆ ಶಾಸಕ ಸಿಮೆಂಟ್ ಮಂಜು ಒತ್ತಾಯ.
ಸಕಲೇಶಪುರ:ಧರ್ಮಸ್ಥಳ ಅಪಪ್ರಚಾರಕ್ಕೆ ಯೂಟ್ಯೂಬರ್ ಮತ್ತು ಇತರರಿಗೆ ವಿದೇಶದಿಂದ ಹಣಕಾಸು ಬಂದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯ ದೃಷ್ಟಿಯಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು.
ಶನಿವಾರ ನಗರದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ನೆಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ.
ಕ್ಷೇತ್ರದ ಹೆಸರನ್ನು ಕೆಡಿಸಲು ಷಡ್ಯಂತರ ಎಣಿದಿರುವ ಗ್ಯಾಂಗಿನ ಎಲ್ಲರನ್ನು ತಕ್ಷಣವೇ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಬೇಕಾಗಿದೆ.
ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್‍ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು. ಈ ವಿಚಾರದಲ್ಲಿ ಸಮಗ್ರವಾಗಿ, ಪಾರದರ್ಶಕವಾಗಿ ತನಿಖೆಯಾಗಬೇಕು ಈಗಾಗಲೇ ಮಹೇಶ್ ಶೆಟ್ಟಿ ತಿಮ್ಮರೋಡಿ ಹಾಗೂ ಮುಸುಕದಾರಿಯನ್ನು ಬಂಧನ ಮಾಡಿರುವುದನ್ನು ಸ್ವಾಗತಿಸುತ್ತೇನೆ.ಅದರಂತೆ ಇಡೀ ರಾಜ್ಯ ಅಶಾಂತಿ ಕಾರಣನಾದ ಭಯೋತ್ಪಾದಕನ ರೀತಿ ವರ್ತಿಸುತ್ತಿರುವ ಯೌಟ್ಯೂಬರ್ ಬಚ್ಚ ಸಮೀರ್ ನನ್ನು ಮೊದಲು ಅರೆಸ್ಟ್ ಮಾಡಿ ಹೆಚ್ಚಿನ ವಿಚಾರಣೆಗೆ ಒಳ ಪಡಿಸಬೇಕು ಈ ಮೂಲಕ ರಾಜ್ದ ಜನರಿಗೆ ಕ್ಷೇತ್ರದ ವಿರುದ್ಧ ನೆಡೆಯುತ್ತಿರುವ ಷಡ್ಯಂತ್ರವನ್ನು ಬಹಿರಂಗ ಪಡಿಸಿಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ಹಳೆ ಬಸ್ ನಿಲ್ದಾಣದಿಂದ ಉಪವಿಭಾಗಾಧಿಕಾರಿಗಳ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸಿ ರಾಜೇಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಅಶ್ವಥ್ ವಳಲಹಳ್ಳಿ,ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್,ನಗರ ಘಟಕ ಅಧ್ಯಕ್ಷ ಲೋಕೇಶ್ (ದಿಂಬು), ತಾಲೂಕು ಯುವ ಮೋರ್ಚಾ ಅಧ್ಯಕ್ಷ ನಿಖಿಲ್ ಹಲಸುಲಿಗೆ,
ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಬಬಿತ ವಿಶ್ವನಾಥ್,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಧು,ಅಗನಿ ಸೋಮಶೇಖರ್ ಸೇರಿದಂತೆ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಗಳ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.