ಗವಿ ಸಿದ್ದೇಶ್ವರ ದೇವರ ದರ್ಶನ ಪಡೆದ ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ತಾಲೂಕಿನ ಹಾನುಬಾಳು ಹೋಬಳಿ ದೇವಾಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಗಜಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ದ ಗವಿ ಸಿದ್ದೇಶ್ವರ ದೇವಸ್ಥಾನಕ್ಕೆ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಶುಕ್ರವಾರ ಮುಂಜಾನೆ ಭೇಟಿ ದೇವರ ದರ್ಶನ ಪಡೆದರು.
ಹಳ್ಳ ದಾಟಿ ದೇವಸ್ಥಾನಕ್ಕೆ ತೆರಳುವುದು ಇಲ್ಲಿನ ವಿಶೇಷವಾಗಿದ್ದು ಕ್ಷೇತ್ರದ ಜನರಿಗೆ ಒಳಿತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಮಾಡಿಸಿದರು.ಈ ವೇಳೆ ಗ್ರಾಮಸ್ಥರು, ಬಿಜೆಪಿ ಕಾರ್ಯಕರ್ತರು ಇದ್ದರು.