ಹಾನುಬಾಳ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗಿಯಾದ ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ದೇಶಾದ್ಯಂತ ಭಾರತೀಯ ಜನತಾ ಪಾರ್ಟಿಯಿಂದ ಸದಸ್ಯತ್ವ ಅಭಿಯಾನ ಚುರುಕಿನಿಂದ ಕೂಡಿದ್ದು ಗ್ರಾಮೀಣ ಪ್ರದೇಶದಲ್ಲಿ ಕಾರ್ಯಕರ್ತರು ಸದಸ್ಯತ್ವ ನೋಂದಣಿ ಕಾರ್ಯದಲ್ಲಿ ಮಗ್ನನರಾಗಿದ್ದಾರೆ.
ಮಂಗಳವಾರ ತಾಲೂಕಿನ ಹಾನುಬಾಳು ಹೋಬಳಿ ಕೇಂದ್ರದಲ್ಲಿ ನೆಡೆಯುತ್ತಿದ್ದ ಸದಸ್ಯತ್ವ ನೋಂದಣಿಯಲ್ಲಿ ಭಾಗವಹಿಸಿ ಸ್ವತಃ ತಾವೇ ಸಾರ್ವಜನಿಕರ ಮೊಬೈಲ್ ಪಡೆದು ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಿದರು.ಈ ವೇಳೆ ಮಾತನಾಡಿದ ಶಾಸಕರು,ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ತಮ್ಮ ಸದಸ್ಯತ್ವ ನೋಂದಣಿ ಮಾಡಿಕೊಂಡಿದ್ದಾರೆ. ಮೋದಿ ಅವರ ಕನಸಾದ ವಿಕಸಿತ ಭಾರತವನ್ನು ನನಸು ಮಾಡುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಅವರು ಹೇಳಿದರು.
ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಗ್ನಿ ಸೋಮಶೇಖರ್, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕ್ಯಾಮನಹಳ್ಳಿ ರಾಜ್ ಕುಮಾರ್, ಬಿಜೆಪಿ ಹಿರಿಯ ಮುಖಂಡರಾದ ಅವರೇಕಾಡು ವಸಂತ ಕುಮಾರ್,ಬಿಜೆಪಿ ಯುವ ಮುಖಂಡರಾದ ವಡಗಲ್ ವಿಶ್ವನಾಥ್ ಸೇರಿದಂತೆ ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.