Tuesday, December 3, 2024
Homeಸುದ್ದಿಗಳುಸಕಲೇಶಪುರವಿಶ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ರಾಜಕೀಯ ಪಕ್ಷವಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್.

ವಿಶ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ರಾಜಕೀಯ ಪಕ್ಷವಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್.

ವಿಶ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ರಾಜಕೀಯ ಪಕ್ಷವಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.

ಶನಿವಾರ ನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಂಬಂಧಿಸಿದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು,ಪಕ್ಷ ಬಲಿಷ್ಠವಾಗಬೇಕೆಂದರೆ ಮುಖ್ಯವಾಗಿ ಸದಸ್ಯತ್ವ ಯಶಸ್ವಿಯಾಗಿ ನೆಡೆಯಬೇಕು.ಸ್ಥಳೀಯ ಮಟ್ಟದಿಂದ ರಾಷ್ಟ್ರ ಮಟ್ಟದಲ್ಲಿ ಅಧಿಕಾರ ಹಿಡಿಯಬೇಕಾದರೆ ಪಕ್ಷಕ್ಕೆ ಹೆಚ್ಚುಸದಸ್ಯರನ್ನು ಸೇರಿಸುವ ಗುರಿ ಹೊಂದಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಬೇಕು.ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಆರೋಪ ಸಾಬೀತು ಮಾಡಲಾಗದೆ ಇಂದು ತಾನೇ ಕೋರ್ಟ್ ಕಟೆಕಟೆಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ತಂದುಕೊಂಡಿದೆ.ಈ ಹಿಂದೆ ಬಿಜೆಪಿ ಎಂದರೆ ಮೇಲ್ವರ್ಗದವರ ಪಕ್ಷ ಎನ್ನುತ್ತಿದ್ದರು. ಆದರೀಗ ಎಲ್ಲ ವರ್ಗದವರೂ ಪಕ್ಷದಲ್ಲಿ ಇದ್ದಾರೆ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ ಎಂಬುದು ನಮ್ಮ ಸಿದ್ಧಾಂತವಾಗಿದೆ’ ಎಂದರು.

ಭಾಜಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತನೊಬ್ಬ ಉನ್ನತ ಹುದ್ದೆ ಅಲಂಕಾರಿಸಲು ಸಾಧ್ಯಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ. ತಾಲೂಕು ಪಂಚಾಯತಿ ಸದಸ್ಯರಾಗಿದ್ದವರು ಶಾಸಕನಾಗಬಹುದು ಎಂದರೆ ಅದಕ್ಕೆ ಸಾಕ್ಷಿ ಸಿಮೆಂಟ್ ಮಂಜು ರವರು ಎಂದರು. ಇಡೀ ಜಿಲ್ಲೆಯಲ್ಲಿ ಸಕಲೇಶಪುರ ಮಂಡಲ ಅತ್ಯಂತ ಕ್ರಿಯಾಶೀಲತೆಯಿಂದ ಕೂಡಿದೆ 

ಕಾಂಗ್ರೆಸ್ ಸರಕಾರ ವಿರುದ್ಧ ನಡೆದ ಮೈಸೂರ್ ಚಲೋ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದು ಸಂತೋಷದ ವಿಷಯ ಎಂದರು.

ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಮಾತನಾಡಿ ಹೆಚ್ಚು ಸದಸ್ಯತ್ವರನ್ನು ನೋಂದಣಿ ಮಾಡುವ ಕಾರ್ಯಕರ್ತರಿಗೆ ಜಿಲ್ಲಾ ಮಟ್ಟದದಿಂದ ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅಭಿನಂದಿಸಲಾಗುವುದು.ಭಾಜಪದ ತಾಲೂಕು ಮಂಡಲದ ಪದಾಧಿಕಾರಿಗಳು, ಮಹಾ ಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳನ್ನು ಇನ್ನು ಕೆಲವೇ ದಿನಗಳಲ್ಲಿ ನೇಮಕ ಮಾಡಲಾಗುವುದು.ಪಕ್ಷ ನೀಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ, ಕ್ರಿಯಾಶೀಲತೆಯೊಂದಿಗೆ ಕಾರ್ಯ ನಿರ್ವಹಿಸುವ ಕಾರ್ಯಕರ್ತರಿಗೆ ಮುಂಬರುವ ಚುನಾವಣೆಯಲ್ಲಿ ಮನ್ನಣೆ ಸಿಗಲಿದೆ ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.

ಈ ಸಂಧರ್ಭದಲ್ಲಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಧು ಬೊಮ್ಮನಕೆರೆ, ಅಗ್ನಿ ಸೋಮಶೇಖರ್ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನದ ಜಿಲ್ಲಾ ಸಹ ಸಂಚಾಲಕರಾದ ರಾಜಕುಮಾರ್, ಮಂಡಲದ ಮಾಜಿ ಅಧ್ಯಕ್ಷರಾದ ಪ್ರತಾಪ್, ಸಂಸ್ಥಾಪಕ ಅಧ್ಯಕ್ಷರಾದ ರಾಮಚಂದ್ರ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು

RELATED ARTICLES
- Advertisment -spot_img

Most Popular