Sunday, March 16, 2025
Homeಸುದ್ದಿಗಳುಸಕಲೇಶಪುರಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು; ಶಾಸಕ ಎಚ್ ಕೆ...

ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು; ಶಾಸಕ ಎಚ್ ಕೆ ಕುಮಾರಸ್ವಾಮಿ

ಸಕಲೇಶಪುರ :  ಕ್ರೀಡೆ,  ಸಾಂಸ್ಕೃತಿಕ, ಪಠ್ಯೇತರ ಚಟುವಟಿಕೆಗಳು  ಶಿಕ್ಷಣದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಶಾಸಕ ಎಚ್ ಕೆ ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ಕ್ರೀಡಾ, ಸ್ಕೌಟ್ ಮತ್ತು ಎನ್ ಎಸ್ ಎಸ್ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ವಿದ್ಯಾರ್ಥಿಗಳು ಪಠ್ಯಚಟುವಟಿಕೆಯ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಪ್ರತಿಭಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಪಠ್ಯ ಶಿಕ್ಷಣ, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕೃತಿ ವಿಭಾಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರುವುದನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಅರಿತುಕೊಳ್ಳಬೇಕು ಎಂದರು.
 ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಹೊಂದಿದಷ್ಟೆ, ಕ್ರೀಡಾ ಮತ್ತು ಕಲೆ-ಸಂಸ್ಕೃತಿ ಕ್ಷೇತ್ರ ಅಭಿವೃದ್ಧಿ ಸಾಧಿಸುತ್ತದೆ. ಈ ಎರಡು ಕ್ಷೇತ್ರಗಳು ಬೆಳವಣಿಗೆಯಾಗಬೇಕಾದರೆ ಶಾಲಾ-ಕಾಲೇಜುಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆ, ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
 ಪಟ್ಟಣಕ್ಕಿಂತ  ಗ್ರಾಮೀಣ ಪ್ರದೇಶಗಳ ಶಾಲಾ-ಕಾಲೇಜುಗಳಲ್ಲಿ ಪಠ್ಯ ಶಿಕ್ಷಣದ ಜತೆಯಲ್ಲೆ ಕ್ರೀಡೆ ಮತ್ತು ಕಲೆ-ಸಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಪೋಷಕರು ಮತ್ತು ಶಿಕ್ಷಕರು ಪ್ರೋತ್ಸಾ ಹಿಸುತ್ತಿರುವುದು ಉತ್ತಮವಾದ ಬೆಳವಣಿಗೆ ಎಂದರು.
ಈ ಸಂದರ್ಭದಲ್ಲಿ ಮಳಲಿ ಗ್ರಾಪಂ ಅಧ್ಯಕ್ಷ ಸತೀಶ್ ಶೆಟ್ಟಿ, ಪುರಸಭಾ ಸದಸ್ಯ ಉಮೆಶ್, ಪ್ರಾಂಶುಪಾಲ ಹರೀಶ್, ಉಪನ್ಯಾಸಕರಾದ ಕುಮಾರ್, ಅಶೋಕ್ ಮತ್ತು ಸುದೀರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
RELATED ARTICLES
- Advertisment -spot_img

Most Popular