ಸಕಲೇಶಪುರ : ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಡಗಿನ ಅಂಚಿನ ಭಾಗವಾದ ತಾಲ್ಲೂಕಿನ ನಿಂಗಾಪುರ ಮತ್ತಿ ಮಳ್ಳಿದಿಣ್ಣೆ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿ ಮೂಲಭೂತ ಸೌಕರ್ಯ ಯೋಜನೆಯಡಿಯಲ್ಲಿ ಸುಮಾರು 30 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಮಂಜುನಾಥ್, ಕೊತ್ನಲ್ಲಿ ತಮ್ಮಣ್ಣ, ಸುಧೀರ್ ನಿಂಗಪುರ, ಉದೀಶ್ ಬಾಳ್ಳುಪೇಟೆ, ಸುಮನ್ ಹೆತ್ತೂರು ಹಾಗೂ ಪಂಚಾಯತಿ ವ್ಯಾಪ್ತಿಯ ಎಲ್ಲ ಮುಖಂಡರು ಭಾಗಿಯಾಗಿದ್ದರು.
ತಾಜಾ ಸುದ್ದಿ