ಸಕಲೇಶಪುರ : ಗುಣಮಟ್ಟದ ರಸ್ತೆ ವ್ಯವಸ್ಥೆ ,ಕುಡಿಯುವ ನೀರು ,ಸಾರಿಗೆ ವಿದ್ಯುತ್ ,ಶಿಕ್ಷಣ ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಜನರಿಗೆ ಮೂಲ ಸೌಕರ‌್ಯ ಒದಗಿಸಿ ಕೊಡಲು ನಿರಂತರ ಶ್ರಮಿಸುವುದಾಗಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು.
ತಾಲ್ಲೂಕಿನ ಯಸಳೂರು ಹೋಬಳಿಯ ಹೊಸೂರು ಗ್ರಾಪಂ ಕಳಲೆ, ಚಂಗಡಹಳ್ಳಿ ಗ್ರಾಪಂ ವ್ಯಾಪ್ತಿಯ ಸಂತೆಹಳ್ಳಿ, ಉಚ್ಚಂಗಿ ಗ್ರಾಪಂ ವ್ಯಾಪ್ತಿಯ ಉಚ್ಚಂಗಿ, ಬೀರಾಲ ಗ್ರಾಮಗಳಿಗೆ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ನಲ್ವತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿ, ತಮ್ಮ ಅಧಿಕಾರದ ಅವಧಿಯಲ್ಲಿ ಗುಣಮಟ್ಟದ ವಿಚಾರದಲ್ಲಿ ರಾಜಿ ಇಲ್ಲ ಆದ್ದರಿಂದ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಗುತ್ತಿಗೆದಾರರಿಗೆ ಸೂಚಿಸಿದ್ದೇನೆ ಎಂದರು. ಶಾಸಕ ಎಚ್ ಕೆ ಕುಮಾರಸ್ವಾಮಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದಾರೆ . ಸಕಲೇಶಪುರ ಆಲೂರು ಕಟ್ಟಾಯ ಕ್ಷೇತ್ರ ತುಂಬಾ ವಿಶಾಲವಾಗಿದ್ದು ಮೂರು ತಾಲ್ಲೂಕುಗಳನ್ನು ಒಳಗೊಂಡಿರುವ ಕ್ಷೇತ್ರವಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಎದ್ದು ಕಾಣುವುದಿಲ್ಲ.
ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಉಳಿದಿರುವ ಅಭಿವೃದ್ಧಿ ಕೆಲಸಗಳನ್ನು ಶಾಸಕರೊಂದಿಗೆ ಕೈಜೋಡಿಸಿ ಪೂರ್ಣಗೊಳಿಸಲು ಪ್ರಯತ್ನ ಪಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಳಲೆ ಗುರುರಾಜ್, ಮಂಜೂರು ವೆಂಕಟೇಶ್, ರಾಮಚಂದ್ರು, ಆನಂದ್, ಕೌಷಿಕ್ ಗೊದ್ದು, ರಾಜೇಶ್, ಸತೀಶ್ ಇನ್ನಿತರರು ಇದ್ದರು