Tuesday, April 8, 2025
Homeಸುದ್ದಿಗಳುರಾಜ್ಯರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಮುರಳಿ ಮೋಹನ್.

ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಮುರಳಿ ಮೋಹನ್.

ಸಕಲೇಶಪುರ :- ಭಾರತ್ ಜೋಡೋ ಪಾದಯಾತ್ರೆ ತುಮಕೂರು ಜಿಲ್ಲೆಯ ತುರುವೇಕೆರೆಗೆ ಆಗಮಿಸಿದ ವೇಳೆ ಸಕಲೇಶಪುರ, ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಜೊತೆಯಾಗಿ ಹೆಜ್ಜೆ ಹಾಕಿ ಗಮನ ಸೆಳೆದರು.

 

ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರಗಳ ಜೊತೆ ಪಾದಯಾತ್ರೆಯಲ್ಲಿ ಜೊತೆಯಾಗಿ ನಡೆದು ಬಹಿರಂಗ ಸಭೆಯ ಬೃಹತ್ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ.

 

ತಮ್ಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ಮುರಳಿ ಮೋಹನವರು ತಮ್ಮ ನೇತೃತ್ವದಲ್ಲಿ ತಾಲೂಕಿನ ಇತರ ಕಾಂಗ್ರೆಸ್ ಮುಖಂಡರ ಜೊತೆಗೂಡಿ ಸುಮಾರು 30 ಬಸ್ ಹಾಗೂ ಟೆಂಪೋ ಗಳಲ್ಲಿ ಸುಮಾರು 5000 ಕ್ಕೂ ಹೆಚ್ಚು ಜನರನ್ನು ಕರೆದುಕೊಂಡು ಹೋಗಿ ರಾಜ್ಯ ನಾಯಕರ ಪ್ರಶಂಸೆಗೆ ಗುರಿಯಾಗಿದ್ದಾರೆ.

 

ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸದೃಢಗೊಳಿಸುತ್ತಿದ್ದು ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ವಿಜಯಪತಾಕೆ ಹಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

RELATED ARTICLES
- Advertisment -spot_img

Most Popular